ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯದ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ

ರಾಜ್ಯದ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ

 


ಸುಬ್ರಹ್ಮಣ್ಯ: ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.


ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.


ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.


ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ. ಚುನಾಯಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


0 تعليقات

إرسال تعليق

Post a Comment (0)

أحدث أقدم