ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮಗಳನ್ನು ಪರಿಣಾಮಕಾರಿ ಜಾರಿಗೊಳಿಸಲು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸೂಚನೆ ನೀಡಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆಯು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ತಜ್ಞರು, ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಸಾರ್ವಜನಿಕರು ಮಾಸ್ಕ್ ಕಡ್ಡಾಯ ನಿಯಮಗಳನ್ನು ಸಮರ್ಪಕವಾಗಿ ಪಾಲಿಸುವಂತೆ ಸೂಚನೆ ನೀಡಿದೆ.
ಕೇಂದ್ರ ಸರ್ಕಾರ ಸೂಚಿಸಿರುವಂತೆ ರಾಜ್ಯದಲ್ಲಿ ನಿತ್ಯ ಕಡ್ಡಾಯವಾಗಿ 30 ಸಾವಿರ ಮಂದಿಯ ಸೋಂಕು ಪರೀಕ್ಷೆ ನಡೆಸಬೇಕು. ಜೊತೆಗೆ ಹೊಸ ರೂಪಾಂತರಿಗಳ ಪತ್ತೆ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ವಂಶವಾಹಿ ಪರೀಕ್ಷೆಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.
ಇನ್ನು ಕೋವಿಡ್ ವೈರಸ್ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಕೋವಿಡ್ ಸೋಂಕಿನ ಮೂರನೇ ಡೋಸ್ ಲಸಿಕೆ ಪಡೆಯಬೇಕು. 2 ಡೋಸ್ ಪಡೆದವರು 3 ನೇ ಡೋಸ್ ಲಸಿಕೆ ಪಡೆಯಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ.
إرسال تعليق