ನಿಡ್ಡೋಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜ್ಞಾನರತ್ನ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧೀನ ಸಂಸ್ಥೆಯಾದ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆ ಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜ್ಞಾನರತ್ನ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ಭಾಸ್ಕರ ದೇವಸ್ಯ, ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀ ಕೆ. ರಾಘವೇಂದ್ರ ಭಟ್, ಐ.ಟಿ.ಐ ಪ್ರಾಂಶುಪಾಲರಾದ ಶ್ರೀಮತಿ ಅನುರಾಧ ಸಾಲ್ಯಾನ್, ಶಾಲ ಪ್ರಾಂಶುಪಾಲರಾದ ಶ್ರೀಮತಿ ದಿವ್ಯ ಎಸ್. ನಾಯಕ್ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.
ಐ.ಟಿ.ಐ ತರಬೇತುದಾರರಾದ ಶ್ರೀ ಕುಮಾರ್ ರವರು ಯೋಗದ ಮಹತ್ವವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು ಹಾಗೂ ವಿದ್ಯಾರ್ಥಿಗಳು ಹಲವು ಯೋಗಗಳ ಪ್ರದರ್ಶನವನ್ನು ಸಾಮೂಹಿಕವಾಗಿ ಮಾಡಿದರು.
ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಯೋಗಕ್ಕೆ ಸಂಬಂಧಿಸಿದಂತೆ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment