ಬೆಂಗಳೂರು: ಆನೇಕಲ್ ತಾಲೂಕಿನ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಬೆಳಕಿಗೆ ಬಂದಿದೆ.
ಮೃತರು ಮಾರತಹಳ್ಳಿ ಮೂಲದ ಗಗನ್ ದೀಪ್ ಹಾಗೂ ಬನಶಂಕರಿ ಮೂಲದ ಯಶಸ್ವಿನಿ ಎಂದು ಗುರುತಿಸಲಾಗಿದೆ.
ನಸುಕಿನ ಜಾವ ಸ್ನೇಹಿತೆಯೊಂದಿಗೆ ಬೈಕ್ನಲ್ಲಿ ಜಾಲಿ ರೈಡ್ ಸರ್ಜಾಪುರದ ಪ್ರೆಸ್ಟೀಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗಗನ್ ದೀಪ್ ಇಂದು ಬೆಳಗ್ಗೆ ತನ್ನ ಸ್ನೇಹಿತೆ ಯಶಸ್ವಿನಿ ಜೊತೆ ಬೈಕ್ನಲ್ಲಿ ತೆರಳಿದ್ದಾರೆ.
ನಸುಕಿನ ಜಾವ 3 ಗಂಟೆಗೆ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಬೈಕ್ನ ನಿಯಂತ್ರಣ ಕಳೆದುಕೊಂಡ ಗಗನ್ ದೀಪ್ ನೇರ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ.
ಅತೀ ವೇಗದಿಂದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಗನ್ ದೀಪ್ ತಲೆ ಸೀಳಿದ್ದು, ಯಶಸ್ವಿನಿಗೆ ತಲೆ ಸೇರಿದಂತೆ ಇನ್ನಿತರ ಮೈ - ಕೈಗೆ ಪೆಟ್ಟಾಗಿತ್ತು. ಆದರೆ ಹೆಚ್ಚು ಹೊತ್ತು ಬದುಕುಳಿಯದ ಅವರಿಬ್ಬರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.
Post a Comment