ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರಿನಿಂದ ತಿರುಪತಿ ಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಅಪಘಾತ

ಬೆಂಗಳೂರಿನಿಂದ ತಿರುಪತಿ ಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಅಪಘಾತ

 


ಬೆಂಗಳೂರು: ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್‌ಆರ್​ಟಿಸಿ ಬಸ್​ ಮಾರ್ಗಮಧ್ಯೆ ಅಪಘಾತಕ್ಕೀಡಾಗಿದ್ದು, ಬಸ್​ನ ಮುಂಭಾಗ ತೆರಳುತ್ತಿದ್ದ ಟ್ರ್ಯಾಕ್ಟರ್​ನ ಟ್ರೈಯರ್​ ಸ್ಫೋಟಗೊಂಡ ಪರಿಣಾಮ ರಸ್ತೆಯಲ್ಲೇ ಟ್ರ್ಯಾಕ್ಟರ್​ ಪಲ್ಟಿಯಾಗಿದೆ.

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ಬಸ್​ ರಸ್ತೆಬದಿಯ ಹಳ್ಳಕ್ಕೆ ನುಗ್ಗಿದೆ.


ಇಂತಹ ಘಟನೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಸಣ್ಣೆ‌ಬಳಿ ಮಂಗಳವಾರ ಸಂಭವಿಸಿದ್ದು, ಅದೃಷ್ಟವಶಾತ್​ ಪ್ರಾಣಹಾನಿ ಸಂಭವಿಸಿಲ್ಲ.

ಕಲ್ಲುತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿಯಾದ ಪರಿಣಾಮ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ಬಸ್​ನಲ್ಲಿ ತಿರುಪತಿಗೆ ಹೋಗುತ್ತಿದ್ದವರೆಲ್ಲ ಪ್ರಾಣಪಾಯದಿಂದ ಪಾರಾಗಿದ್ದು, ಡ್ರೈವರ್​ಗೆ ಸಣ್ಣಪುಟ್ಟ ಗಾಯವಾಗಿದೆ.

ಕೆಂಪೇಗೌಡ ಏರ್ಪೋಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم