ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶ್ರದ್ಧಾ ಬಳ್ಳಂಬೆಟ್ಟು ಎ+ ನೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶ್ರದ್ಧಾ ಬಳ್ಳಂಬೆಟ್ಟು ಎ+ ನೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ



ಬದಿಯಡ್ಕ: ಕೇರಳ ರಾಜ್ಯದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿನಿ ಶ್ರದ್ಧಾ ಬಳ್ಳಂಬೆಟ್ಟು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್‌ನೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ.


ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪಿಸಿಎಂಬಿ ಅಧ್ಯಯನಕ್ಕೆ ಸೇರ್ಪಡೆಯಾಗಿದ್ದಾಳೆ.


ಈಕೆ ಬದಿಯಡ್ಕ ಸಮೀಪದ ಕೃಷ್ಣಪ್ರಕಾಶ ಬಳ್ಳಂಬೆಟ್ಟು- ವಸಂತಲಕ್ಷ್ಮಿ ದಂಪತಿಯ  ಪುತ್ರಿ.


ಯುಎಸ್‌ಎಸ್ ಪರೀಕ್ಷೆಯಲ್ಲಿ ಶೇ 92 ಅಂಕಗಳೊಂದಿಗೆ ಉತ್ತೀರ್ಣಳಾಗಿರುವ ಈಕೆ ಹಿಂದಿ ಪರೀಕ್ಷೆಯಲ್ಲಿ ಪ್ರವೀಣ ಪದವಿ ಗಳಿಸಿದ್ದಾಳೆ. ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಸೀನಿಯರ್ ವಿಭಾಗದಲ್ಲಿ ಕಲಿಯುತ್ತಿದ್ದಾಳೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post