ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಂಪಾಜೆ, ಕರಿಕೆ, ಚೆಂಬು, ಪೆರಾಜೆ ಭಾಗದಲ್ಲಿ ಬೆಳಿಗ್ಗೆ 9.10 ರಲ್ಲಿ ಸುಮಾರು 3 ಸೆಕೆಂಡ್ ಗಳ ಕಂಪನದ ಅನುಭವ ಆಗಿದೆ ಎಂದು ಸ್ಥಳೀಯರು ಇಲ್ಲಿನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ.
ನೆಲದೊಳಗಿಂದ ವಿಚಿತ್ರವಾದ ಶಬ್ದವೂ ಬಂದಿದೆ ಎನ್ನಲಾಗಿದೆ.
ಘಟನೆ ಬಗ್ಗೆ ಪರಿಶೀಲನೆಗಾಗಿ ಕಂದಾಯ ಇಲಾಖೆಯ ತಂಡವು ಸ್ಥಳಕ್ಕೆ ತೆರಳಿದೆ.
إرسال تعليق