ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೋದಿ ಸರಕಾರಕ್ಕೆ 8 ವರ್ಷ: ಮಂಗಳೂರು ದಕ್ಷಿಣ ಬಿಜೆಪಿ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

ಮೋದಿ ಸರಕಾರಕ್ಕೆ 8 ವರ್ಷ: ಮಂಗಳೂರು ದಕ್ಷಿಣ ಬಿಜೆಪಿ ವತಿಯಿಂದ ಸಸಿ ನೆಡುವ ಕಾರ್ಯಕ್ರಮ


ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಸಾಮಾಜಿಕ ಜಾಲ ತಾಣ ಪ್ರಕೋಷ್ಠದ ವತಿಯಿಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷ ಸಂಭ್ರಮಾಚರಣೆಯ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನ ಮತ್ತು ವಿಶ್ವ ಪರಿಸರ ದಿನದ ಅಂಗವಾಗಿ ಶಕ್ತಿನಗರ ಸ್ಮಶಾನದ ಪರಿಸರದಲ್ಲಿ ಸಸಿ ನೆಡುವ ಕಾರ್ಯಕ್ರಮ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ ವೇದವ್ಯಾಸ ಕಾಮತ್‌ ಅವರ ಮಾರ್ಗದರ್ಶನದಲ್ಲಿ ಜರುಗಿತು.


ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರು ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ಪ್ರಕೋಷ್ಠದ ಸಂಚಾಲಕರಾದ ಶ್ರೀ ನಿಲೇಶ್ ಕಾಮತ ಅವರು ಸ್ವಾಗತಿಸಿದರು.


ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮ ನ ಪಾ ಸದಸ್ಯರಾದ ಕಿಶೋರ್ ಕೊಟ್ಟಾರಿ, ಮಂಡಲ ಉಪಾಧ್ಯಕ್ಷರು ಹಾಗೂ ಪೂರ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಅಜಯ ಕುಲಶೇಖರ, ಮಂಡಲ ಉಪಾಧ್ಯಕ್ಷರಾದ ರಮೇಶ್ ಹೆಗ್ಡೆ, ಸಾಮಾಜಿಕ ಜಾಲ ತಾಣ ಪ್ರಕೋಷ್ಠದ ಸಹಸಂಚಾಲಕರಾದ ಅಶ್ವಿತ್ ಕೊಟ್ಟಾರಿ, ಪೂರ್ವ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ರವಿಚಂದ್ರ, ಉಪಾಧ್ಯಕ್ಷರಾದ ಪ್ರಶಾಂತ್ ಮರೋಳಿ, ಸಾಮಾಜಿಕ ಜಾಲ ತಾಣ ಮಂಡಲ ಪ್ರಮುಖರಾದ ಶಬರೀಶ್ ಹಾಗೂ ಸಾಯಿ ಪ್ರಸಾದ್ ಶೆಟ್ಟಿ, ಸ್ಥಳೀಯ ಶಕ್ತಿ ಕೇಂದ್ರ ಪ್ರಮುಖರಾದ ರಿತೇಶ್, ಬೂತ್ ಅಧ್ಯಕ್ಷರಾದ ಮಾಧವ ಭಟ್, ಮನಿ ನೀತಿನಗರ, ರವೀಂದ್ರ ಕುಚ್ಚಿಕಾಡ್, ಅಕ್ಷಯ್ ಶಕ್ತಿನಗರ ಉಪಸ್ಥಿತರಿದ್ದರು


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post