ಮಂಗಳೂರು: ಪತಿಯನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿಯಾದ ಘಟನೆಯೊಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಲ್ಪಾ (30) ಪರಾರಿಯಾದ ಮಹಿಳೆ. ಅವರು ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್ ಬಸ್ ನಿಲ್ದಾಣಕ್ಕೆ ಬಂದಿದ್ದರು.
ಬಸ್ ನಿಲ್ದಾಣದಲ್ಲಿ ಪಿಲಿಕುಳದ ಬಸ್ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವೆನೆಂದು ಹೇಳಿ ಹೋಗಿದ್ದ ಶಿಲ್ಪಾ, ಅಲ್ಲಿಂದ ತಪ್ಪಿಸಿಕೊಂಡು ಉಡುಪಿ ಬಸ್ ಹತ್ತಿ ಪರಾರಿಯಾಗಿದ್ದಾರೆ.
ಪತಿ ಕೂಡಲೇ ಶಿಲ್ಪಾ ಅವರ ಮೊಬೈಲ್‌ಗೆ ಕರೆ ಮಾಡಿದರೂ, ಆಕೆ ಉತ್ತರಿಸಲಿಲ್ಲ. ಅನಂತರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಶಿಲ್ಪಾ ಅವರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಮತ್ತು ಕೆಂಪು ಬಣ್ಣದ ಚೂಡಿದಾರದ ಟಾಪ್ ಮತ್ತು ಹಸುರು ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಅವರ ಬಗ್ಗೆ ಮಾಹಿತಿ ಸಿಕ್ಕಿದವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Post a Comment