ಮಂಗಳೂರು: “ನಾಲ್ವಡಿ ಕೃಷ್ಣರಾಜ ಒಡೆಯರು 1915 ರಲ್ಲಿ ‘ಕರ್ನಾಟಕ ಸಾಹಿತ್ಯ ಪರಿಷತ್ತ’ನ್ನು ಹುಟ್ಟುಹಾಕಿದರು. ಮುಂದೆ 1935 ರಲ್ಲಿ ಈ ಹೆಸರನ್ನು ‘ಕನ್ನಡ ಸಾಹಿತ್ಯ ಪರಿಷತ್ತು’ ಎಂದು ಬದಲಾಯಿಸಿದರು. ಕರ್ನಾಟಕದ ಶೈಕ್ಷಣಿಕ, ಸಾಂಸ್ಕøತಿಕ, ಔದ್ಯಮಿಕ, ಸಾಹಿತ್ಯಿಕ, ಕೃಷಿ, ರಾಜಕೀಯ, ಸಾಮಾಜಿಕ ಹೀಗೆ ಎಲ್ಲಾ ಕ್ಷೇತ್ರಗಳಿಗೂ ಅಪಾರವಾದ ಕೊಡುಗೆಗಳನ್ನಿತ್ತವರು ನಾಲ್ವಡಿ ಕೃಷ್ಣರಾಜ ಒಡೆಯರು” ಎಂದು ಕೆನರಾ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ಸಾಹಿತಿ ರಘು ಇಡ್ಕಿದು ಅವರು ಅಭಿಪ್ರಾಯಪಟ್ಟರು.
ಅವರು ಶ್ರೀ ಭಾರತೀ ಕಾಲೇಜಿನಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ 138ನೆಯ ಜಯಂತ್ಯುತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕವು ಆಯೋಜಿಸಿದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ರೇವಣಕರರು, “ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸುವ ಮೂಲಕ ಸಾಹಿತ್ಯಪರ ಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ಮಾಡಿದವರು ನಾಲ್ವಡಿ ಕೃಷ್ಣರಾಜ ಒಡೆಯರು. ಅವರ ಜನ್ಮ ದಿನವನ್ನು ಆಚರಿಸುವ ಮೂಲಕ ಪ್ರತಿಯೋರ್ವ ಕನ್ನಡಿಗನೂ ಅವರಿಗೆ ಗೌರವವನ್ನು ಸಲ್ಲಿಸಲೇ ಬೇಕು. ಅವರು ತೋರಿದ ದಾರಿಯಲ್ಲಿ ನಡೆದು ಎಲ್ಲರೂ ಕನ್ನಡದ ಸೇವೆಯನ್ನು ಕೈಗೊಳ್ಳಲು ಬದ್ಧರಾಗಬೇಕು” ಎಂದು ಹೇಳಿದರು.
ಶ್ರೀ ಭಾರತೀ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳು ಹಾಗೂ ಮಂಗಳೂರಿನ ಹವ್ಯಕ ಮಂಡಲದ ಅಧ್ಯಕ್ಷರೂ ಖ್ಯಾತ ಉದ್ಯಮಿಯೂ ಆದ ಶ್ರೀ ಗಣೇಶ ಮೋಹನ್ ಕಾಶೀಮಠರು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮ ಸಂಯೋಜಕರಾದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಡಾ. ಮುರಲೀ ಮೋಹನ್ ಚೂಂತಾರರು ಪ್ರಾಸ್ತಾವಿಕವಾಗಿ ಮಾತನಾಡುವುದರೊಂದಿಗೆ ಕಾರ್ಯಕ್ರಮವನ್ನು ನಿರೂಪಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯರಾದ ಡಾ. ಅರುಣಾ ನಾಗರಾಜ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಇನ್ನೋರ್ವ ಗೌರವ ಕಾರ್ಯದರ್ಶಿ ಶ್ರೀ ಗಣೇಶ್ ಪ್ರಸಾದ್ ಜೀ ಸ್ವಾಗತಿಸಿದರು.
ಕೋಶಾಧಿಕಾರಿ ಶ್ರೀ ಸುಬ್ರಾಯ ಭಟ್ಟರು ಧನ್ಯವಾದ ಸಮರ್ಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು, ಗಣ್ಯ ವ್ಯಕ್ತಿಗಳು ಹಾಗೂ ಶ್ರೀ ಭಾರತೀ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment