ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಬೇಡ್ಕರ್‌ಗೆ ಅವಮಾನಿಸುವ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗೆ ಶಾಸಕ ಹರ್ಷವರ್ಧನ್ ಮನವಿ

ಅಂಬೇಡ್ಕರ್‌ಗೆ ಅವಮಾನಿಸುವ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗೆ ಶಾಸಕ ಹರ್ಷವರ್ಧನ್ ಮನವಿ


ಮೈಸೂರು/ನಂಜನಗೂಡು: ನಂಜನಗೂಡು ಶಾಸಕ ಬಿ. ಹರ್ಷವರ್ಧನ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುವ ಹಾಗೂ ಅಗೌರವ ತೋರುವ ಯಾವುದೇ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.


ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಮುಖ್ಯಮಂತ್ರಿಯವರು ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ಶಾಸಕರು ಮೈಸೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಪತ್ರವನ್ನೂ ಸಲ್ಲಿಸಿದರು.


ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಉಲ್ಲೇಖಿಸದಿರುವುದು ಸರಿಯಲ್ಲ. ಬಸವಣ್ಣ ಮತ್ತು ಕುವೆಂಪು ಅವರ ಕುರಿತಾದ ಪಾಠಗಳು ಸತ್ಯಕ್ಕೆ ಹತ್ತಿರವಾಗಿರಲಿಲ್ಲ ಎಂಬುದು ಹಲವರ ಅಭಿಪ್ರಾಯ. ಭವಿಷ್ಯದಲ್ಲಿ ಇಂತಹ ಲೋಪಗಳು ಮರುಕಳಿಸಬಾರದು, ಇದರಿಂದ ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم