ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆ.ಎಲ್‌. ಕುಂಡಂತಾಯರಿಗೆ ಪತ್ರಿಕಾ ದಿನದ ಗೌರವ, ಜೂನ್ 30 ರಂದು ಕುಂಜೂರಲ್ಲಿ ಪ್ರದಾನ

ಕೆ.ಎಲ್‌. ಕುಂಡಂತಾಯರಿಗೆ ಪತ್ರಿಕಾ ದಿನದ ಗೌರವ, ಜೂನ್ 30 ರಂದು ಕುಂಜೂರಲ್ಲಿ ಪ್ರದಾನ


ಉಡುಪಿ: ಹಿರಿಯ ಪತ್ರಕರ್ತ, ಯಕ್ಷಪ್ರಭಾ ಸಂಪಾದಕ ಕೆ.ಎಲ್. ಕುಂಡಂತಾಯ ಅವರಿಗೆ ಬೆಂಗಳೂರಿನ ಪತ್ರಕರ್ತರ ವೇದಿಕೆ ನೀಡುವ ಪತ್ರಿಕಾ ದಿನದ ಗೌರವವನ್ನು ಜೂನ್ 30 ರಂದು ಅವರ ನಿವಾಸದಲ್ಲಿ ನಡೆಯುವ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಡಾ. ಹರಿಕೃಷ್ಣ ಪುನರೂರು ಅವರು ಹಿರಿಯ ಪತ್ರಕರ್ತ ಪ್ರತಿನಿಧಿ ಸಂಪಾದಕ ಡಾ. ಉದಯ ರವಿ ಅವರ ಅಧ್ಯಕ್ಷತೆಯಲ್ಲಿ ಪ್ರದಾನಿಸುವರು ಎಂದು ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಡಾ. ಶೇಖರ ಅಜೆಕಾರು ತಿಳಿಸಿದ್ದಾರೆ.


70 ರ ಹರೆಯದ ಧಣಿವರಿಯದ ಕುಂಡಂತಾಯ ಅವರು 20 ವರ್ಷಗಳ ಕಾಲ ಉದಯವಾಣಿ ದೈನಿಕದಲ್ಲಿ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿ ಇದೀಗ ಕಟೀಲು ಕ್ಷೇತ್ರದಿಂದ ಪ್ರಕಟವಾಗುವ ಯಕ್ಷಪ್ರಭಾ ಪತ್ರಿಕೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿರಂತರ ಶೋಧನೆಯ, ಸಂಶೋಧನೆಯ ಮನೋಭಾವವುಳ್ಳ ಸಜ್ಜನ ಸಾಹಿತಿಯಾಗಿದ್ದಾರೆ.


ವಿಶ್ವನಾಥ ಶೆಣೈ, ಕರುಣಾ ಸುರೇಶ್ ಪೈ, ಎಸ್.ಆರ್.ಬಂಡಿಮಾರ್, ಪುನೀತ್ ಎಂ, ಪ್ರಶಾಂತ್ ಕಾಮತ್ ಕುಕ್ಕಿಕಟ್ಟೆ, ಜನಾರ್ದನ ಕೊಡವೂರು, ರಾಕೇಶ್ ಕುಂಜೂರು ಸಹಿತ ಆಹ್ವಾನಿತ ಗಣ್ಯರು ಉಪಸ್ಥಿತರಿರುವರು.

ಅಂಬಾತನಯ ಮುದ್ರಾಡಿ, ಎ.ಎಸ್.ಎನ್.ಹೆಬ್ಬಾರ್, ವಿದ್ವಾನ್ ಬಿ.ಚಂದ್ರಯ್ಯ, ಬಿ.ಎ.ಸನದಿ, ಮಲಾರ್ ಜಯರಾಮ ರೈ, ಎಂ.ವಿ.ಕಾಮತ್, ಸತೀಶ್ ಪೈ ಮಣಿಪಾಲ, ಕು.ಗೋ ಉಡುಪಿ, ಶ್ರೀನಿವಾಸ ರಾವ್ ಎಕ್ಕಾರು, ಕು.ಗೋ ಉಡುಪಿ, ಬಿ.ಸಿ.ರಾವ್ ಶಿವಪುರ, ನಾದವೈಭವಂ ಉಡುಪಿ ವಾಸುದೇವ ಭಟ್ ಸಹಿತ ಗಣ್ಯರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 تعليقات

إرسال تعليق

Post a Comment (0)

أحدث أقدم