ಬೆಳ್ತಂಗಡಿ: ಎಸ್‌ಡಿಎಂ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಂದ ಸ ಹಿ ಪ್ರ ಶಾಲೆ ಬಂಗಾಡಿ ಶಾಲೆಯ ಗ್ರಂಥಾಲಯಕ್ಕೆ 60ಕ್ಕೂ ಹೆಚ್ಚಿನ ಪುಸ್ತಕಗಳನ್ನು ನೀಡಲಾಯಿತು. ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಸ್ಮರಣ ಶಕ್ತಿ, ಕತೆ ಹೇಳುವುದು ಹಾಗೂ ಇನ್ನಿತರ ಸೃಜನಶೀಲ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Post a Comment