ಉಡುಪಿ: ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ.ಕೊಡ್ಗಿ) ಸೋಮವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಕೊಡ್ಗಿ ಅವರ ನಿಧನಕ್ಕೆ ಬೈಂದೂರು-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎ.ಜಿ ಕೊಡ್ಗಿ ಅವರು ಕ್ರಾಂತಿಕಾರಿ ಕೃಷಿಕರಾಗಿದ್ದರು. ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಅವರು 2 ಬಾರಿ ಶಾಸಕರಾಗಿದ್ದರು. ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿ, ಉಡುಪಿ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು.
ಅವರ ನೇತೃತ್ವದಲ್ಲಿ ಅಮಾಸೆಬೈಲು ಕರ್ನಾಟಕದ ಮೊದಲ ಸೌರಶಕ್ತಿ ಚಾಲಿತ ಗ್ರಾಮ ಪಂಚಾಯಿತಿಯಾಗಿದೆ. ಈ ಯೋಜನೆಯ ಹಿಂದಿನ ಮೆದುಳು, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎ.ಜಿ ಕೊಡ್ಗಿ ಅವರು ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾಗ ತಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಸೋಲಾರ್ ದೀಪಗಳನ್ನು ಒದಗಿಸುವ ಯೋಜನೆಯನ್ನು ರೂಪಿಸಿದ್ದವರು.
ಎ ಜಿ ಕೊಡ್ಗಿ ಅವರ ಊರಿನ ಹಾಗೂ ಜನಪರ ಕಾಳಜಿವುಳ್ಳ ಆದರ್ಶ ವ್ಯಕ್ತಿತ್ವವನ್ನು ಸ್ಮರಿಸುತ್ತಾ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಮತ್ತು ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
- ಬಿ. ವೈ.ರಾಘವೇಂದ್ರ, ಸಂಸದ
ಅಮಾಸೆಬೈಲಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ (ಜೂನ್.14) ಅವರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق