ಮಂಗಳೂರು: ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಎಂಬಲ್ಲಿನ ಸಮುದ್ರದಲ್ಲಿ ಹಡಗು ಮುಳುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಅದರಲ್ಲಿರುವ ತೈಲವು ಸೋರಿಕೆಯಾದಲ್ಲಿ ಸುರಕ್ಷತೆಯ ಬಗ್ಗೆ ಉಳ್ಳಾಲ ಬೀಚ್‌ನಲ್ಲಿ ಅಣಕು ಪ್ರದರ್ಶನವನ್ನು ಜಿಲ್ಲಾಡಳಿತ ವತಿಯಿಂದ ನಡೆಸಲಾಯಿತು.
ಕೋಸ್ಟ್ ಗಾರ್ಡ್, ಹೋಮ್ ಗಾರ್ಡ್ ಇಲಾಖೆ, ಅಗ್ನಿಶಾಮಕ ದಳ, ಪೋಲಿಸ್ ಇಲಾಖೆ, ವಿಪತ್ತು ನಿರ್ವಹಣಾ ತಂಡ ಮತ್ತು ತೈಲ ಕಂಪನಿಗಳ ಸಹಭಾಗಿತ್ವದಲ್ಲಿ ಈ ಅಣಕು ಪ್ರದರ್ಶನ ನಡೆಯಿತು ಎಂದು ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಅವರು ತಿಳಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment