ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದು, ಸೋನಿಯಾ ಗಾಂಧಿ ಅವರಿಗೆ ಕೋವಿಡ್ ದೃಢಪಟ್ಟಿದೆ.
ನಿನ್ನೆಯಿಂದ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು. ಕೋವಿಡ್ ಟೆಸ್ಟ್ ಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. 3-4 ದಿನಗಳಲ್ಲಿ ಸೋನಿಯಾ ಗಾಂಧಿ ಚೇತರಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
إرسال تعليق