ಬಂಟ್ವಾಳ: ತಾಲೂಕಿನ ಸಜಿಪನಡುವಿನ ಲಕ್ಷ್ಮಣಕಟ್ಟೆ ಎಂಬಲ್ಲಿ ಸುಮಾರು 600 ವರ್ಷಗಳಷ್ಟು ಹಳೆಯ ಅಶ್ವತ್ಥ ಮರ ಉರುಳಿಬಿದ್ದಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ.
ಲುಕ್ಮಾನ್ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರನ್ನು ಮರದ ಬಳಿ ನಿಲ್ಲಿಸಿ ಕಾರಿನೊಳಗಿದ್ದ ತನ್ನ ಸಂಬಂಧಿ ಮಹಿಳೆಯರಿಬ್ಬರನ್ನು ಇಳಿಸಿ ತಾನೂ ಇಳಿಯಲು ಹೊರಟಾಗ ಈ ಘಟನೆ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
إرسال تعليق