ಬೆಂಗಳೂರು : ಶಾಲಾ ಬಸ್ ಕಲ್ಲಿನ ಕ್ವಾರಿಗೆ ಉರುಳಿ ಬಿದ್ದ ಘಟನೆಯೊಂದು ಬೆಂಗಳೂರ ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕೂಡ್ಲು ಬಳಿ ನಡೆದಿದೆ.
ಬೆಂಗಳೂರಿನ ಹೆಚ್.ಎಸ್.ಎಲ್ ಲೇಔಟ್ ಇಂಟರ್ ನ್ಯಾಷನಲ್ ಶಾಲೆಯ ಬಸ್ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಲಿನ ಕ್ವಾರಿಯೊಳಗೆ ಉರುಳಿ ಬಿದ್ದಿದೆ.
ಸದ್ಯ ಬಸ್ ನಲ್ಲಿ ಶಾಲಾ ವಿದ್ಯಾರ್ಥಿಗಳು ಇರಲಿಲ್ಲ. ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
إرسال تعليق