ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

 


ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ  ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು, ಹಾಸನ ಸೇರಿ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.


ಹಾಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬೀದರ್, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


0 تعليقات

إرسال تعليق

Post a Comment (0)

أحدث أقدم