ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಕರ್ನಾಟಕ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.
ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ ಮಂಡ್ಯ, ಮೈಸೂರು, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Post a Comment