ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುರುಡೇಶ್ವರ ಪ್ರವಾಸಕ್ಕೆ ಬಂದ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆ

ಮುರುಡೇಶ್ವರ ಪ್ರವಾಸಕ್ಕೆ ಬಂದ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆ

 


ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರವಾಸಕ್ಕೆ ಬಂದ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆಯೊಂದು ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ದಿಂದ 12 ಮಂದಿ ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ತನ್ನ ತಂದೆ ತಾಯಿಯೊಂದಿಗೆ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಸುಶಾಂತ ಎಂ.ಎಸ್. ಎಂಬ ಯುವಕ ಸಮುದ್ರ ಪಾಲಾಗಿದ್ದಾನೆ ಎಂದು ಮುರುಡೇಶ್ವರ ಪೊಲೀಸರು ಮಾಹಿತಿ ನೀಡಿದ್ದಾರೆ.


ಶ್ರೀನಿವಾಸ್‌ಪುರದ 12 ಯುವಕರು ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದಾಗ ಇದ್ದಕ್ಕಿದ್ದಂತೆ ದೊಡ್ಡ ‌ಅಲೆಯೊಂದು ಬಂದು ಮೂವರನ್ನು ಎಳೆದುಕೊಂಡಿದೆ. ಅವರಲ್ಲಿ ಇಬ್ಬರು ಯುವಕರನ್ನು ರಕ್ಷಿಸಿದ್ದು, ಅಬ್ರಾರ್ ಶೇಖ್ ಎಂಬಾತನು ಅಲೆಗಳ ನಡುವೆ ಕಣ್ಮರೆಯಾಗಿದ್ದಾನೆ.


ಅದೇ ರೀತಿ ಆಗುಂಬೆಯ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಸುಶಾಂತ್ ಮತ್ತು ಆತನ ಚಿಕ್ಕಪ್ಪ ಅಲೆಗಳಲ್ಲಿ ಮುಳುಗಲು ಆರಂಭಿಸಿದರು.

ಈ ವೇಳೆ, ಸ್ಥಳೀಯ ಮೀನುಗಾರರು ಸುಶಾಂತ್​ನ ಚಿಕ್ಕಪ್ಪನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದರೆ, ಸುಶಾಂತ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಇಬ್ಬರು ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.


ಘಟನೆಗೆ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯ್ಕ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.


0 Comments

Post a Comment

Post a Comment (0)

Previous Post Next Post