ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಪ್ಪಿನಂಗಡಿ; ಅಪ್ರಾಪ್ತ ಬಾಲಕಿಯನ್ನು ಯುವಕ ಬಲವಂತವಾಗಿ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ

ಉಪ್ಪಿನಂಗಡಿ; ಅಪ್ರಾಪ್ತ ಬಾಲಕಿಯನ್ನು ಯುವಕ ಬಲವಂತವಾಗಿ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ

 


ಉಪ್ಪಿನಂಗಡಿ : ಬಾಲಕಿಯನ್ನು ಯುವಕ ಬಲವಂತವಾಗಿ ಲಾಡ್ಜ್​​​ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ನಡೆದಿದೆ.

ಆರೋಪಿ ಮುನಾಸೀರ್ ಎಂದು ಗುರುತಿಸಲಾಗಿದೆ. ಈತ ಬಾಲಕಿಯ ನೆರೆಮನೆಯವನಾಗಿದ್ದು, ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.


ಮೇ.30 ರಂದು ಬಾಲಕಿ ಮನೆಯಿಂದ ಶಾಲೆಗೆ‌ ಹೋಗುವಾಗ ಮುನಾಸೀರ್ ಕಾರಿನಲ್ಲಿ ಶಾಲೆಗೆ ಬಿಡುತ್ತೇನೆ ಬಾ ಎಂದು ಕೈ ಹಿಡಿದು ಕರೆದುಕೊಂಡು ಹೋಗಿ ಶಾಲೆಗೆ ಬಿಡದೆ ಉಪ್ಪಿನಂಗಡಿಯ ಲಾಡ್ಜ್​​​ಗೆ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾ‌ನೆ‌.‌

ಸೋಮವಾರ(ಜೂ.6) ಕೂಡ ಬೆಳಗ್ಗೆ ಬಾಲಕಿ ಶಾಲೆಗೆ ಹೋಗುತ್ತಿದ್ದ ವೇಳೆ ಬಲವಂತವಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿ ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ


ಅಲ್ಲದೇ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಸಾಯಿಸುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದಾನೆ.

ಬಳಿಕ‌ ಲಾಡ್ಜ್ ನಿಂದ ಕರೆದುಕೊಂಡು ಬಂದು ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾನೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಬಾಲಕಿ ದೂರು ನೀಡಿದ್ದಾಳೆ.


0 تعليقات

إرسال تعليق

Post a Comment (0)

أحدث أقدم