ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚುಟುಕು ಸಾಹಿತ್ಯ ಪರಿಷತ್ತು ಕಡಬ ತಾಲೂಕು ಅಧ್ಯಕ್ಷರಾಗಿ ವಿ.ಕೆ. ಕಡಬ ನೇಮಕ

ಚುಟುಕು ಸಾಹಿತ್ಯ ಪರಿಷತ್ತು ಕಡಬ ತಾಲೂಕು ಅಧ್ಯಕ್ಷರಾಗಿ ವಿ.ಕೆ. ಕಡಬ ನೇಮಕ


ಮಂಗಳೂರು: ಮೈಸೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ನೂತನ ಅಧ್ಯಕ್ಷರನ್ನಾಗಿ ಎಸ್.ಡಿ.ಎಂ ಕಾಲೇಜು ಪತ್ರಿಕೋದ್ಯಮ ವಿಭಾಗದ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಂಯೋಜಕ ಲೇಖಕ, ಪತ್ರಕರ್ತ ವಿ.ಕೆ ಕಡಬ ಅವರು ನೇಮಕಗೊಂಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಅವರು ವಿ.ಕೆ. ಕಡಬ ಅವರನ್ನು ನೇಮಕ ಮಾಡಿದ್ದಾರೆ.


ಕನ್ನಡ ಮತ್ತು ತುಳು ಭಾಷೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡುತ್ತಿರುವ ವಿ.ಕೆ ಕಡಬ ಅವರು ಹಲವು  ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದಾರೆ. ಆಕಾಶವಾಣಿಯಲ್ಲಿ ಇವರ ಅನೇಕ ಕವಿತೆ, ಭಾಷಣ, ವಿಶೇಷ ಕಾರ್ಯಕ್ರಮಗಳು ಪ್ರಸಾರವಾಗಿವೆ. ಆಕಾಶವಾಣಿಯಲ್ಲಿ ಎರಡು ವರ್ಷ ತುಳು ವಿಭಾಗದಲ್ಲಿ ಕಾರ್ಯಕ್ರಮ ನಿರ್ಮಾಣ ಸಹಾಯಕನಾಗಿ ಸೇವೆ ಸಲ್ಲಿಸಿದ್ದಾರೆ.


ಬಳಿಕ ಸಂತ ಅಲೋಶಿಯಸ್ ಕಾಲೇಜು ಅಧೀನದ ರೇಡಿಯೋ ಸಾರಂಗ್ ನಲ್ಲಿ ತುಳು ವಿಭಾಗದಲ್ಲಿ ಆರು ವರ್ಷ  ಮುಖ್ಯ ಕಾರ್ಯಕ್ರಮ ನಿರ್ವಾಹಕ/ನಿರೂಪಕನಾಗಿ ಕರ್ತವ್ಯ ನಿರ್ವಹಿಸಿದ್ದಾರೆ.


ತೆಂಗು ಉತ್ಪಾದಕರ ಕಂಪೆನಿ ನಿಯಮಿತ ಇದರ ಕಡಬ ತಾಲೂಕು ನಿರ್ದೇಶಕರಾಗಿರುವ ಇವರು ಕಡಬ ಜರ್ನಲಿಸ್ಟ್ ಯೂನಿಯನ್ ಘಟಕದ ಅದ್ಯಕ್ಷರಾಗಿದ್ದಾರೆ. ಸಾಹಿತ್ಯ ರಚನೆ, ಪಾರ್ದನ ಸಂಗ್ರಹ, ಸಂದರ್ಶನ, ವರದಿಗಾರಿಕೆ ಆಸಕ್ತಿಯ ಕ್ಷೇತ್ರವಾಗಿದ್ದು ಮಾಧ್ಯಮ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post Views: 35324


0 Comments

Post a Comment

Post a Comment (0)

Previous Post Next Post