ಮಂಗಳೂರು : ಹಿರಿಯ ಸಾಹಿತಿ ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯುಎ ಖಾಸಿಮ್ ಉಳ್ಳಾಲ (74) ಇಂದು ನಿಧನರಾಗಿದ್ದಾರೆ.
ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕಥೆ, ಕಾದಂಬರಿ, ಕವನ, ಲೇಖನಗಳನ್ನು ಬರೆಯುತ್ತಿದ್ದ ಖಾಸಿಮ್ ಅನೇಕ ಕೃತಿಗಳನ್ನು ರಚಿಸಿದ್ದಾರೆ.
ಬ್ಯಾರಿ ಅಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಖಾಸಿಮ್ ಉಳ್ಳಾಲ, ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ, ಕೇಂದ್ರ ಬ್ಯಾರಿ ಪರಿಷತ್ ಮತ್ತು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಪದಾಧಿಕಾರಿಯಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Post a Comment