ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಅನಿವಾರ್ಯ: ದೇಲಂಪಾಡಿ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಅನಿವಾರ್ಯ: ದೇಲಂಪಾಡಿ


ಮಂಗಳೂರು: "ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21" ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ ಗುರುವಾರ (ಜೂ.16) ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ನಡೆಯಿತು. ಖ್ಯಾತ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಮತ್ತು ಯೋಗ ಶಿಕ್ಷಕಿ ಸುಮಾ ಇವರ ಮಾರ್ಗದರ್ಶನದಲ್ಲಿ ಈ ತರಬೇತಿ ಶಿಬಿರ ನಡೆಯಿತು.


ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಅರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು.


ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ನೇತೃತ್ವದಲ್ಲಿ ಈ ಶಿಬಿರ ನಡೆಯಿತು. ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post