ಹೈದರಾಬಾದ್ : ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರು ಮನೆಯಲ್ಲಿ ಐಸೊಲೇಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಬಾಲಕೃಷ್ಣ ಅವರು ಎನ್ ಬಿಕೆ 107 ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಚಿತ್ರತಂಡ ಖಚಿತ ಪಡಿಸಿದೆ.
ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲ. ಆದರೂ ಅವರು ಮನೆಯಲ್ಲಿ ಐಸೊಲೇಟ್ ಆಗಿದ್ದಾರೆ. ಇತ್ತೀಚೆಗೆ ಬಾಲಯ್ಯ ಅವರ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ.
إرسال تعليق