ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 2 ವರ್ಷಗಳ ಬಳಿಕ ಇಂದು ಮತ್ತೆ ಅಮರನಾಥ ಯಾತ್ರೆ ಪ್ರಾರಂಭ

2 ವರ್ಷಗಳ ಬಳಿಕ ಇಂದು ಮತ್ತೆ ಅಮರನಾಥ ಯಾತ್ರೆ ಪ್ರಾರಂಭ

 


ಶ್ರೀನಗರ: ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ.


ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‍ಪ್ರಸಿದ್ಧವಾಗಿದೆ.


ಅನಂತನಾಗ್ ಜಿಲ್ಲೆಯ ಪಹಲ್ಗಾಮ್‍ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‍ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದರು.


ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‍ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದರು. ಅಮರನಾಥ ದೇಗುಲ ಮಂಡಳಿ (ಎಸ್‍ಎಎಸ್‍ಬಿ) ಸಹ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಆನ್‍ಲೈನ್ ದರ್ಶನಕ್ಕೆ ಅವಕಾಶ ಕಲ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಯಾತ್ರಾರ್ಥಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ.

109 ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್ ಗಳ ವ್ಯವಸ್ಥೆ ಸಹ ಇದೆ. ಪ್ರಾಥಮಿಕ ಚಿಕಿತ್ಸೆಯ ಸಾಮಾಗ್ರಿಗಳನ್ನು ಯಾತ್ರೆ ಮಾರ್ಗ ಮಧ್ಯೆ ಇಡಲಾಗಿದೆ. ಆಗಸ್ಟ್ 11ರವರೆಗೆ ಯಾತ್ರಿಕರು ಯಾತ್ರೆ ಮಾಡಬಹುದು.


0 Comments

Post a Comment

Post a Comment (0)

Previous Post Next Post