ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ; ವೈದ್ಯ ಸಾವು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ; ವೈದ್ಯ ಸಾವು

 


ಕೊಪ್ಪಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನ ಮಂಗಳಪುರ ಬಳಿ ಗುರುವಾರ ನಡೆದ ಅಪಘಾತದಲ್ಲಿ ತಾಲ್ಲೂಕಿನ ಬೆಟಗೇರಿ ಗ್ರಾಮದ ಆರ್‌ಎಂಪಿ ವೈದ್ಯ ಕಲಿಗಣನಾಥ (65) ಮೃತಪಟ್ಟಿದ್ದಾರೆ.


ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಮೇಲೆಲ್ಲಾ ದಿನಬಳಕೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post