ಉಡುಪಿ : ಜಿಲ್ಲೆಯ ಮಳೆಯ ಅಬ್ಬರಕ್ಕೆ ಭಾರೀ ಅನಾಹುತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಯಿಂದ ಸಮುದ್ರಕ್ಕೆ ಕಾರು ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ ಕಾರು ಸಮುದ್ರಕ್ಕೆ ಬಿದ್ದಿದೆ. ಆ ಕಾರಿನಲ್ಲಿ ನಾಲ್ವರಿದ್ದರು. ಓರ್ವ ಕಾರಿನೊಳಗೆ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಆತನಿಗಾಗಿ ಅಗ್ನಿಶಾಮಕದಳ, ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ.
Post a Comment