ಪಡುಬಿದ್ರೆ : ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಪಡುಬಿದ್ರೆ ಜಂಕ್ಷನ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಸವಾರ ಸಂಶುದ್ದೀನ್ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಲಾರಿಯನ್ನು ಮೇಲಕ್ಕೆತ್ತುವ ಕಾರ್ಯ ಮಾಡಲಾಗುತ್ತಿದೆ.
ಶಂಸುದ್ದೀನ್ ಐಸ್‌ಕ್ಯಾಂಡಿ ವ್ಯಾಪಾರ ಮಾಡುತಿದ್ದು, ಮಳೆಗಾಲದಲ್ಲಿ ಈ ವ್ಯಾಪಾರ ಇಲ್ಲದ ಕಾರಣ ಮನೆಯಲ್ಲಿದ್ದರು.
ಮಂಗಳವಾರ ಪಡುಬಿದ್ರಿಯ ಸಂತೆಯಲ್ಲಿ ತರಕಾರಿ ಖರೀದಿಸಿ ಕಂಚಿನಡ್ಕದ ಮನೆಯತ್ತ ತೆರಳುತಿದ್ದಾಗ ಈ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Post a Comment