ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಯ ಇರಿದು ಕೊಲೆ

ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಯ ಇರಿದು ಕೊಲೆ

 


ಆನೇಕಲ್: ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯನ್ನು ಇರಿದು ಕೊಲೆ ಮಾಡಿದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಮೇಲ್ನೋಟಕ್ಕೆ ರಸ್ತೆ ಅಪಘಾತದಂತೆ ಕಂಡ ಘಟನೆ ಇದೀಗ ಕೊಲೆ ಎಂದು ತಿಳಿದು ಬಂದಿದೆ. ಪ್ರಕರಣವನ್ನು ಜಿಗಣಿ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೇರಳ ಕಾಸರಗೂಡು ಮೂಲದ ಸನು ಥಾಮ್ಸನ್(31) ಕೊಲೆಯಾದವರು.


ಜಿಗಣಿಯ ಟಾಟಾ ಅಡ್ವಾನ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಸನು ಥಾಮ್ಸನ್ ರಾತ್ರಿ ಕೆಲಸ ಮುಗಿಸಿಕೊಂಡು ಬರುತ್ತಿದ್ದಾಗ ಮೂರು ಮಂದಿ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಲೆ ಮಾಡಿ ಕೆಇಬಿ ಮುಂಭಾಗದಲ್ಲಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ನೂತನ ಹೆಚ್ಚುವರಿ ವರಿಷ್ಠಾಧಿಕಾರಿ ಎಂ ಎಲ್ ಪುರುಷೋತ್ತಮ್, ಡಿವೈಎಸ್ಪಿ ಎಂ ಮಲ್ಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಗಣಿ ಪೋಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.


0 Comments

Post a Comment

Post a Comment (0)

Previous Post Next Post