ಕಲಬುರಗಿ: ವಿದ್ಯಾರ್ಥಿನಿ ಯೊಬ್ಬಳು ಸೇತುವೆ ಮೇಲೆ ತನ್ನ ಡಿಯೋ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕಲಬುರಗಿಯ ಚಿತ್ತಾಪುರದಲ್ಲಿ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗೆ ನದಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಾಗಿದೆ.
ಭಾಗ್ಯಶ್ರೀ (21 ವರ್ಷ) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ತಾಪುರ ತಾಲೂಕಿನ ಗುಂಡುಗುರ್ತಿ ಗ್ರಾಮದ ನಿವಾಸಿಯಾಗಿದ್ದ ಈಕೆ ಕಲಬುರಗಿಯಲ್ಲಿ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಗುಂಡುಗುರ್ತಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ್ ಅವರ ಪುತ್ರಿ.
ಇಂದು ಮನೆಯಿಂದ ತನ್ನ ಡಿಯೋ ವಾಹನದಲ್ಲಿ ಹೊರಟಿದ್ದ ಈಕೆ ಶಹಾಬಾದ್ ಶಂಕರವಾಡಿ ಬಳಿಯ ಕಾಗಿಣಾ ನದಿಯ ಸೇತುವೆ ಮೇಲೇ ವಾಹನ ನಿಲ್ಲಿಸಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಪತ್ತೆ ಮಾಡಿ ತೆಗೆದಿದ್ದಾರೆ. ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق