ಬೆಂಗಳೂರು : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರದ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ ಗ್ರಾಮದ ಬಳಿ ಅಪಘಾತದ ಸಂಭವಿಸಿದ್ದು, ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ತಿರುಪತಿಗೆ ಹೋಗುತ್ತಿದ್ದ ವೇಳೆ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ತೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
إرسال تعليق