ಮಂಗಳೂರು: ನೀರು ತುಂಬಿದ್ದ ಕೆಂಪು ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಉಳಾಯಿಬೆಟ್ಟು ಕಾಯರಪದವು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಜೋಕಟ್ಟೆ ನಿವಾಸಿ ಶಿಯಾಬ್ (21) ಎಂದು ಗುರುತಿಸಲಾಗಿದೆ. ಈತ ಗೆಳೆಯರ ಜೊತೆ ಕ್ರಿಕೆಟ್ ಆಡಿ ನಂತರ ಅಲ್ಲಿಯೇ ಮೈದಾನದ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ನೀರು ತುಂಬಿದ್ದ ಹೊಂಡದಲ್ಲಿ ಈಜಲು ಸಾಧ್ಯವಾಗದೆ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق