ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಅಪಘಾತ; ಕಾರಿನಲ್ಲಿದ್ದ ಮೂವರು ಸಾವು, ಇಬ್ಬರು ಗಂಭೀರ

ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಅಪಘಾತ; ಕಾರಿನಲ್ಲಿದ್ದ ಮೂವರು ಸಾವು, ಇಬ್ಬರು ಗಂಭೀರ

 


ತುಮಕೂರು : ತಿಪಟೂರು ತಾಲೂಕಿನ ಮತ್ತಿಹಳ್ಳಿ ಬಳಿ ಕೆಎಸ್ ಆರ್‌ಟಿಸಿ ಬಸ್ಸು ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರು ಮತ್ತು ಬಸ್ಸು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಉಳಿದ ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರಿನ ತಿಪಟೂರು ತಾಲೂಕಿನ ಮತ್ತಿಹಳ್ಳಿಯಲ್ಲಿ ಘಟನೆ ನಡೆದಿದೆ.


ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ಆಗಿದ್ದು, ತುಮಕೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಕಾರು ಎಂದು ಗುರುತಿಸಲಾಗಿದೆ.

ಈ ಬಗ್ಗೆ ಈಗಾಗಲೇ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


0 Comments

Post a Comment

Post a Comment (0)

Previous Post Next Post