ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎರಡು ಲಾರಿಗಳ ನಡುವೆ ಅಪಘಾತ; ಇಬ್ಬರು ಸಾವು

ಎರಡು ಲಾರಿಗಳ ನಡುವೆ ಅಪಘಾತ; ಇಬ್ಬರು ಸಾವು

 


ಹುಬ್ಬಳ್ಳಿ: ಧಾರವಾಡ ಹೊರವಲಯದ ಯರಿಕೊಪ್ಪ ಬೈಪಾಸ್‌ನಲ್ಲಿ ಬೆಳಗ್ಗಿನ ವೇಳೆ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಲಾರಿ ಚಾಲಕರ ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ಗುರುತು ಸಿಗುತ್ತಿಲ್ಲ.

ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم