ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎರಡು ಸಾರಿಗೆ ಬಸ್ ಗಳ ನಡುವೆ ಅಪಘಾತ; 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಎರಡು ಸಾರಿಗೆ ಬಸ್ ಗಳ ನಡುವೆ ಅಪಘಾತ; 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

 


ಹಾವೇರಿ: ಹಾನಗಲ್ ತಾಲೂಕು ಬೈಚುವಳ್ಳಿ ಗ್ರಾಮದ ಬಳಿ ಶನಿವಾರ ಬೆಳಗ್ಗಿನ ವೇಳೆ ಎರಡು ಸಾರಿಗೆ ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಎರಡೂ ಬಸ್​ನ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದೆ.


ಬಸ್​ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಸ್​ನಲ್ಲಿ ಶಾಲೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಬಸ್​ಗಳು ಅಪಘಾತಕ್ಕೀಡಾಗಿದ್ದು, ಕೆಲಕಾಲ ಆತಂಕ ಸೃಷ್ಟಿಸಿತ್ತು. 


ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಹಾನಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

0 تعليقات

إرسال تعليق

Post a Comment (0)

أحدث أقدم