ಮಂಗಳೂರು: ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 9 ನೇ ವಾರ್ಷಿಕೋತ್ಸವ ಅಮೃತ ಪ್ರಕಾಶ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಇದರ ಮಹಾ ಪ್ರಬಂಧಕರಾದ ಮಹೇಶ್ ಜೆ.ವಹಿಸಿದರು. ಅಮೃತ ಪ್ರಕಾಶ ವಿಶೇಷ ಸಂಚಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ.ಎಂ.ಪಿ. ಶ್ರೀನಾಥ್ ಬಿಡುಗಡೆಗೊಳಿಸಿದರು.
ಮಧುಸೂದನ್ ಕುಶೆ ಕಾಲೇಜು ಅತ್ತಾವರ ಇದರ ಪ್ರಾಂಶುಪಾಲರಾದ ಡಾ.ಬಿಂದುಸಾರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಕವಯತ್ರಿ ಸುರೇಖಾ ಯಳವಾರ ಕಾರ್ಯಕ್ರಮ ನಿರೂಪಿಸಿದರು. ಡಾ.ಅರುಣಾ ನಾಗರಾಜ್ ವಂದಿಸಿದರು. ಸತ್ಯಪ್ರಕಾಶ್ ಶೆಟ್ಟಿ, ಸುಜಾತ ಸುವರ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق