ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಮಾರುತಿ ಬಲೆರೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಬಿದ್ದ ಘಟನೆಯೊಂದು ಬುಧವಾರ ಮುಂಜಾನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ಕುಶಾಂತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಕಾರು ಜಖಂಗೊಂಡಿದೆ.
ಸಂಪೂರ್ಣವಾಗಿ ಜಖಂಗೊಂಡ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ ಎಂದು ತಿಳಿದುಬಂದಿದೆ.
Post a Comment