ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಘಟಕದ ಗೃಹರಕ್ಷಕರಿಗೆ ಸಸಿ ಹಂಚುವ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಇವರು ಪರಿಸರ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು.
ಪರಿಸರದ ರಕ್ಷಣೆ ಮತ್ತು ಮರಗಿಡಗಳನ್ನು ನೆಟ್ಟು ಬೆಳೆಸುವುದು ಕೇವಲ ಸರಕಾರದ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರೀಕನೂ ಈ ಸಾಮಾಜಿಕ ಹೊಣೆಗಾರಿಕೆ ಅರಿತು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ರಕ್ಷಣೆಗೆ ಮುಂದಾಗಬೇಕು. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಮಾಡಬೇಕು ಎಂದು ಕರೆ ನೀಡಿದರು.
ಪರಿಸರ ರಕ್ಷಣೆ, ಗಿಡ ಮರಗಳ ಪೋಷಣೆ ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ ಹೊಣೆಗಾರಿಕೆ ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಬಂಟ್ವಾಳ ಘಟಕದ ಘಟಕಾಧಿಕಾರಿಯಾದ ಐತಪ್ಪ ಹಾಗೂ ಗೃಹರಕ್ಷಕ ಮತ್ತು ಗೃಹರಕ್ಷಕಿಯರು ಭಾಗವಹಿಸಿದ್ದರು ಹಾಗೂ ಇವರಿಗೆ ಉಚಿತ ಸಸಿಗಳನ್ನು ವಿತರಿಸಲಾಯಿತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment