ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಳ್ತಂಗಡಿ ; ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ ; ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ ಹೃದಯಾಘಾತದಿಂದ ನಿಧನ

 


ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40ವ) ಅವರು ಹೃದಯಾಘಾತದಿಂದ ಜು.14 ರಂದು ಮೃತಪಟ್ಟ ಘಟನೆಯೊಂದು ನಡೆದಿದೆ.


ಮಲ್ಲಿಕಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.


ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಮಲ್ಲಿಕಾ ಅವರು ಪಿಲಿಚಂಡಿ ಕಲ್ಲು ನಿವಾಸಿಯಾಗಿದ್ದು, ಪ್ರಸ್ತುತ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.


0 تعليقات

إرسال تعليق

Post a Comment (0)

أحدث أقدم