ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಬಡಾವಣೆಯಲ್ಲಿರುವ ಡಿ.ಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಸಂದೇಶದ ಮೂಲಕ ಅಪರಿಚಿತನೊಬ್ಬ ಬಾಂಬ್ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿರುವ 1500 ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಿ ಪೊಲೀಸರು ತಪಾಸಣೆ ನಡೆಸಿದರು. ಬಳಿಕ ಇದೊಂದು ಹುಸಿ ಬೆದರಿಕೆ ಎಂಬುದು ಚಿತವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ 9 ಗಂಟೆ ಸುಮಾರಿಗೆ ಶಾಲೆಯ ಸಿಬ್ಬಂದಿಯೊಬ್ಬರು ಇ-ಮೇಲ್ ಪರಿಶೀಲಿಸುತ್ತಿದ್ದರು. ಇದೇ ವೇಳೆ ಅಪರಿಚಿತರು ಕಳುಹಿಸಿದ್ದ ಇ-ಮೇಲ್ ತೆರೆದಿದ್ದರು. 'ನಿಮ್ಮ ಶಾಲೆಯಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ ಅದು ಸ್ಫೋಟಿಸಲಿದೆ' ಎಂದು ಬೆದರಿಕೆ ಹಾಕಲಾಗಿತ್ತು. ಆತಂಕಿತರಾದ ಶಾಲಾ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ, ಮಕ್ಕಳನ್ನು ಬೇರೆ ಸ್ಥಳಾಂತರಿಸಿ ಕಟ್ಟಡವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದರು. ಇಂದಿನ ಮಟ್ಟಿಗೆ ಶಾಲೆಗೆ ರಜೆ ನೀಡಲಾಗಿದೆ. ಪೊಲೀಸರು ಭದ್ರತೆ ಕಾರ್ಯ ಮುಂದುವರಿಸಿದ್ದಾರೆ. ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment