ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೈಕ್ ಅಪಘಾತ; ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯ

ಬೈಕ್ ಅಪಘಾತ; ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯ

 


ತುಮಕೂರು: ಬೈಕ್ ಅಪಘಾತದಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯಗೊಂಡ ಘಟನೆಯೊಂದು ತುಮಕೂರು ನಗರದ ಶಿರಾ ಗೇಟ್ ಬಳಿ ನಡೆದಿದೆ.


ಶಿರಾ ಗೇಟ್ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ, ಎಂಬಿಬಿಎಸ್ ವಿದ್ಯಾರ್ಥಿ ಹರ್ಷ ಮೇಟಿಗೆ ಗಂಭೀರ ಗಾಯಗಳಾಗಿವೆ.


ಗಾಯಾಳುವನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೆಚ್.ವೈ.ಮೇಟಿ ಆಸ್ಪತ್ರೆಗೆ ತೆರಳಿ ಮೊಮ್ಮಗನ ಆರೋಗ್ಯ ವಿಚಾರಿಸಿದ್ದಾರೆ.

0 Comments

Post a Comment

Post a Comment (0)

Previous Post Next Post