ತುಮಕೂರು: ಬೈಕ್ ಅಪಘಾತದಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯಗೊಂಡ ಘಟನೆಯೊಂದು ತುಮಕೂರು ನಗರದ ಶಿರಾ ಗೇಟ್ ಬಳಿ ನಡೆದಿದೆ.
ಶಿರಾ ಗೇಟ್ ಬಳಿ ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ, ಎಂಬಿಬಿಎಸ್ ವಿದ್ಯಾರ್ಥಿ ಹರ್ಷ ಮೇಟಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುವನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೆಚ್.ವೈ.ಮೇಟಿ ಆಸ್ಪತ್ರೆಗೆ ತೆರಳಿ ಮೊಮ್ಮಗನ ಆರೋಗ್ಯ ವಿಚಾರಿಸಿದ್ದಾರೆ.
إرسال تعليق