ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸ್ತೆ ಅಪಘಾತ ದಲ್ಲಿ ಬೈಕ್ ಸವಾರ ಸಾವು

ರಸ್ತೆ ಅಪಘಾತ ದಲ್ಲಿ ಬೈಕ್ ಸವಾರ ಸಾವು

 


ಬೆಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವನ್ನಪ್ಪಿದ ಘಟನೆಯೊಂದು ಜೆಪಿ ನಗರ ಮೂರನೇ ಹಂತದ ಖಾಸಗಿ ಸ್ಕೂಲ್ ಬಳಿ ನಡೆದಿದೆ. ಕಾರ್ತಿಕ್ ಮೃತ ದುರ್ದೈವಿ.


ಇಂದು ಮುಂಜಾನೆ 5 ಗಂಟೆ ಸುಮಾರಿಗೆ ವೇಗವಾಗಿ ಬಂದ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಘಟನೆಯಲ್ಲಿ ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.


ಘಟನಾ ಸ್ಥಳಕ್ಕೆ ಜಯನಗರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


0 Comments

Post a Comment

Post a Comment (0)

Previous Post Next Post