ಬೆಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಯೊಂದು ಜೆಪಿ ನಗರ ಮೂರನೇ ಹಂತದ ಖಾಸಗಿ ಸ್ಕೂಲ್ ಬಳಿ ನಡೆದಿದೆ. ಕಾರ್ತಿಕ್ ಮೃತ ದುರ್ದೈವಿ.
ಇಂದು ಮುಂಜಾನೆ 5 ಗಂಟೆ ಸುಮಾರಿಗೆ ವೇಗವಾಗಿ ಬಂದ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಜಯನಗರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
إرسال تعليق