ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದ ಬೊಮ್ಮಾಯಿ ದಂಪತಿ

ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದ ಬೊಮ್ಮಾಯಿ ದಂಪತಿ

 


ಮೈಸೂರು: ಇಂದು ಮೈಸೂರು, ಮಂಡ್ಯ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ಆಶೀರ್ವಾದ ಪಡೆದರು.

ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನ ಹೆಚ್​​​​ಎಎಲ್ ವಿಮಾನ‌ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ‌ ಬೆಳಗ್ಗೆ 9.20ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದರು. ರಸ್ತೆ ಮೂಲಕ ಬೆಳಗ್ಗೆ 9.45ಕ್ಕೆ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವರ್ಧಂತಿ ವಿಶೇಷ ಪೂಜೆ ಸಲ್ಲಿಸಿದರು.


ಈ ವೇಳೆ ಅರ್ಚನೆಯನ್ನು ಮಾಡಿಸಿದರು. ಸಚಿವರಾದ ಗೋವಿಂದ ಕಾರಜೋಳ್ , ಎಸ್ ಟಿ ಸೋಮಶೇಖರ್ ಮತ್ತು ಇತರರು ಉಪಸ್ಥಿತರಿದ್ದರು.

ನಂತರ ರಸ್ತೆ ಮೂಲಕ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಬೆಳಗ್ಗೆ 11ಕ್ಕೆ ಜಿಲ್ಲೆ ಹೆಚ್​ಡಿ‌ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದರು.

0 Comments

Post a Comment

Post a Comment (0)

Previous Post Next Post