ಕೋಲಾರ: ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.
ಹೋಂಡಾ ಕಂಪನಿಗೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ವೇಮಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Post a Comment