ತಿರುಪತಿ (ಆಂಧ್ರಪ್ರದೇಶ): ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಇಬ್ಬರು ಮೃತಪಟ್ಟ ಘಟನೆಯೊಂದು ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ಚಿಲ್ಲಕೂರು ಮಂಡಲದ ವಾರಗಲಿ ಕ್ರಾಸ್ ರಸ್ತೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬಸವರಾಜು ಮತ್ತು ಮಂಜು ಎಂದು ಗುರುತಿಸಲಾಗಿದ್ದು, ಕರ್ನಾಟಕದ ಯಾವ ಊರಿನವರು ಎಂದು ಇನ್ನಷ್ಟೇ ತಿಳಿಯಬೇಕಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಗಿರೀಶ್, ಶಿವರಾಮ ಕೃಷ್ಣ ಮತ್ತು ವೆಂಕಟೇಶ್ ಎಂಬವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇವರು ಕಾರಿನಲ್ಲಿದ್ದವರು ನಾಯ್ಡು ಪೇಟೆಗೆ ಹೋಗುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ನೆಲ್ಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತಕ್ಕೀಡಾದ ಕಾರಿನ ಸಂಖ್ಯೆ ಕೆಎ 36 - ಬಿ 5707 ಎಂದು ಗೊತ್ತಾಗಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Post a Comment