ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ವಿದ್ಯಾನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು.
ಮಂಗಳವಾರ ಬೆಳಗ್ಗಿನ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ.
Post a Comment